LatestNational

*ಮೈಸೂರು-ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ: 19 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಮೈಸೂರು-ದರ್ಭಾಂಗ್ ಬಗಾಮತಿ ಎಕ್ಸ್ ಪ್ರೆಸ್ ರೈಲು ಭೀಕರ ಅಪಘಾತವಾಗಿದ್ದು, ಘಟನೆಯಲ್ಲಿ 19 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಮೈಸೂರಿನಿಂದ ಹೊರಟಿದ್ದ ಎಕ್ಸ್‌ಪ್ರೆಸ್‌ ರೈಲು ತಮಿಳುನಾಡಿನ ಕಾವರಪೇಟ್ಟೈ ಬಳಿ ಲೂಪ್‌ ಲೇನ್‌ನಲ್ಲಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್‌ ರೈಲು ನಿಂತಿದ್ದ ಲೂಪ್‌ ಲೇನ್‌ ಟ್ರ್ಯಾಕ್‌ಗೆ ರೈಲು ನುಗ್ಗಿದ್ದು, ಡಿಕ್ಕಿಯಾದ ರಭಸಕ್ಕೆ ರೈಲಿನ ಬೋಗಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು. 12ರಿಂದ 13 ಬೋಗಿಗಳು ಹಳಿ ತಪ್ಪಿ ಬಿದ್ದಿವೆ.

Home add -Advt

ಅಪಘಾತದ ಭೀಕರತೆಯಲ್ಲಿ 19 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಅದೃಷ್ಟವಶಾತ್ ಯಾವುದೇಸಾವು-ನೋವು ಸಂಭವಿಸಿಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಎಲ್ಲಾ ಪ್ರಯಣಿಕರಮ್ಮು ಮೆಮು ರೈಲಿನ ಮೂಲಕ ಶಿಫ್ಟ್ ಮಾಡಲಾಗಿದೆ. ಪ್ರಯಾಣಿಕರು ಎಲ್ಲೆಗೆ ಹೋಗಬೇಕು ಅಲ್ಲಲ್ಲಿಗೆ ಹೋಗಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Related Articles

Back to top button