Kannada NewsKarnataka NewsLatest

*ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಕಾರು ಚಾಲಕ, ಗನ್ ಮ್ಯಾನ್ ಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಹಾಗೂ ಗನ್ ಮ್ಯಾನ್ ಗೆ ಜಾಮೀನು ಮಂಜೂರಾಗಿದೆ.

ಅನಂತ್ ಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ಕಾರು ಓವರ್ ಟೇಕ್ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಪುತ್ರ ಅಶಿತೋಷ್, ಕಾರು ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ನಲವರ ಮೇಲೆ ಹಲ್ಲೆ ನಡೆಸಿದ್ದರು. ದಾಬಸ್ ಪೇಟೆ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಪ್ರಕರಣ ಸಂಬಂಧ ದಾಬಸ್ ಪೇಟೆ ಪೊಲೀಸರು ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಹಾಗೂ ಗನ್ ಮ್ಯಾನ್ ನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಕಾರು ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button