LatestNational

*ಫಾರ್ಮಾ ಕಂಪನಿಯಲ್ಲಿ ಭೀಕರ ಸ್ಫೋಟ: 15 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಫಾರ್ಮಾ ಕಂಪನಿಯೊಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ.

ಅನಕಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಅಡ್ವಾನ್ಸ್ಡ್ ಸೈನ್ಸಸ್ ಪ್ರೈ.ಲಿ ಕಂಪನಿಯ ಔಷಧ ಘಟಕದಲ್ಲಿ ಈ ದುರಂತ ಸಂಭವಿಸಿದೆ. ಔಷಧ ಘಟಕದ ಸ್ಥಾವರದಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button