ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಒಂದೇ ಹಾಸ್ಟೇಲ್ ನಲ್ಲಿ ವಾಸವಾಗಿದ್ದ 149 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆದಿದೆ.
ಆಂಧ್ರದ ಪೂರ್ವಗೋದಾವರಿ ಜಿಲ್ಲೆಯ ರಾಜಮಂಡ್ರಿಯಲ್ಲಿನ ಕಾತೇರು ತಿರುಮಲ ಕಾಲೇಜಿನ ಹಾಸ್ಟೇಲ್ ನ 149 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಹಾಸ್ಟೇಲ್ ನಲ್ಲೇ ಕ್ವಾರಂಟೈನ್ ಮಾಡಲಾಗಿದೆ.
ಹಾಸ್ಟೇಲ್ ನಲ್ಲಿಯೇ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಿರುವುದನ್ನು ಖಂಡಿಸಿ ಪೋಷಕರು ಹಾಸ್ಟೇಲ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ