Kannada NewsLatestNational

*ಎರಡು ರೈಲುಗಳ ನಡುವೆ ಅಪಘಾತ; ಸಾವಿನ ಸಂಖ್ಯೆ 14ಕ್ಕೇರಿಕೆ; 12 ರೈಲುಗಳ ಸಂಚಾರ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಆಂದ್ರಪ್ರದೇಶದ ವಿಜಯನಗರಂ ನಲ್ಲಿ ಎರಡು ಪ್ಯಾಸೇಂಜರ್ ರೈಲುಗಳ ನಡುವೆ ನಿನ್ನೆ ಅಪಘಾತ ಸಂಭವಿಸಿತ್ತು. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಹಲವರು ಗಾಯಗೊಂಡಿದ್ದಾರೆ.

ವಿಶಾಖಪಟ್ಟಣಂ-ರಾಯಗಡ ಪ್ಯಾಸೇಂಜರ್ ರೈಲು ಕಾಂತಕಪಲ್ಲಿ ರೈಲು ನಿಲ್ದಾಣದಲ್ಲಿ ಸಿಗ್ನಲ್ ಗಾಗಿ ನಿಂತಿತ್ತು. ಈ ಹೇಳೆ ಹಿಂದಿನಿಂದ ಬಂದ ಮತ್ತೊಂದು ಪ್ಯಾಸೇಂಜರ್ ರೈಲು ವಿಶಾಖಪಟ್ಟಣಂ-ರಾಯಗಡ ಪ್ಯಾಸೇಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂರು ಬೋಗಿಗಳು ಹಳಿ ತಪ್ಪಿ ದುರಂತ ಸಂಭವಿಸಿದೆ.

ಅಪಘಾತದ ಬಳಿಕ 12 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. 15 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button