
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಫಾರ್ಮಾ ಕಂಪನಿಯ ಲ್ಯಾಬ್ ನಲ್ಲಿ ಭೀಕರ ಅಗ್ನಿ ಅವಘಢ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಇಲ್ಲಿನ ಅನಕಾಪಲ್ಲಿ ಪರವಾಡ ಲಾರಸ್ ಫಾರ್ಮಾ ಲ್ಯಾಬ್ ನಲ್ಲಿ ಈ ದುರಂತ ಸಂಭವಿಸಿದೆ. ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 25 ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ. ಫಾರ್ಮಾ ಲ್ಯಾಬ್ ನಲ್ಲಿ ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಸೇರುವವರ ಪಟ್ಟಿ
https://pragati.taskdun.com/list-of-congress-joiners-today-in-belgaum/