Latest

ಸೇತುವೆಗೆ ಗುದ್ದಿದ ಕಾರು; 6 ತಿಂಗಳ ಮಗು ಸೇರಿ ಐವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಭೀಕರ ಕಾರು ಅಪಘಾತದಲ್ಲಿ 6 ತಿಂಗಳ ಮಗು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಆಂದ್ರಪ್ರದೇಶದ ವಿಜಯವಾಡ-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಗೌರವರಂ ಗ್ರಾಮದ ಬಳಿ ನಡೆದಿದೆ.

ಕಾರು ಚಾಲಕನ ನಿಯಂತ್ರಣತಪ್ಪಿ ನಾಗಾರ್ಜುನ ಸಾಗರ ಎಡದಂಡೆ ಕಾಲುವೆಯ ಸೇತುವೆಯ ಕಟ್ಟೆಗೆ ಗುದ್ದಿದೆ. ಪರಿಣಾಮ 6 ತಿಂಗಳ ಮಗು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಓರ್ವ ಗಾಯಾಳುವನ್ನು ಜಗ್ಗಯ್ಯಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೇಟಿಎಂ ಸಂಸ್ಥಾಪಕ ಅರೆಸ್ಟ್ ಜಾಮೀನಿನ ಮೇಲೆ ಬಿಡುಗಡೆ

Related Articles

Back to top button