
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಬ್ಯಾನರ್ ಕಟ್ಟುವಾಗ ದುರಂತವೊಂದು ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಾಟಿಪರು ಗ್ರಾಮದಲ್ಲಿ ನಡೆದಿದೆ.
ಕಾರ್ಯಕ್ರಮವೊಂದರ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವನಿಗೆ ಗಂಭೀರವಾದ ಗಾಯಗಳಾಗಿವೆ.
ಗಾಯಾಳುವನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.