Wanted Tailor2
Cancer Hospital 2
Bottom Add. 3

*ಪಟಾಕಿ ದುರಂತ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*

ದುರಂತದಲ್ಲಿ ಮಡಿದ ಹಲವರು ವಿದ್ಯಾರ್ಥಿಗಳು


ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನಗೊಂಡಿದ್ದು, ಮೃತರಲ್ಲಿ ಹಲವರು ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 14 ಜನರು ಸಾವನ್ನಪ್ಪಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಪ್ರಕರಣವನ್ನು ಸಿಐಡಿ ತನಿಖೆಗೆ ನೀಡುವುದಾಗಿ ಹೇಳಿದರು.

ಪಟಾಕಿ ಗೋಡೋನ್ ದುರಂತ ದು:ಖಕರ. 14 ಜನರು ಸಜೀವ ದಹನಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ತಮಿಳುನಾಡಿನಿಂದ ಟ್ರಕ್ ನಲ್ಲಿ ಪಟಾಕಿಯನ್ನು ತರಲಾಗಿದೆ. ಶನಿವಾರ ಮಧ್ಯಾಹ್ನ 3.15 ರಿಂದ 3.30ರ ಸಮಯದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ಇದೆ. ದುರಂತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ವಿದ್ಯುತ್ ತಂತಿ ಅಥವಾ ಯುಪಿಎಸ್ ನಿಂದ ಘಟನೆ ನಡೆದಿರಬಹುದು ಎನ್ನಲಾಗುತ್ತಿದೆ. ಇಲ್ಲಿ ಕೆಲಸ ಮಾಡುತ್ತಿದ್ದವರೆಲ್ಲ ವಿದ್ಯಾರ್ಥಿಗಳು. ರಜೆ ಸಮಯದಲ್ಲಿ ದುಡಿಮೆಗಾಗಿ ಇಲ್ಲಿಗೆ ಬಂದಿದ್ದಾರೆ. ಪ್ರಕರಣ ಸಂಬಂಧ ಗೋಡೌನ್ ಮಾಲೀಕ ರಾಮಸ್ವಾಮಿ ರೆಡ್ಡಿ, ಪುತ್ರ ನವೀನ್, ಕಟ್ಟಡದ ಮಾಲೀಕ ಅನಿಲ್ ನನ್ನು ಪೊಲೀಸರು ಬಂಧಿಸಿದ್ದಾರೆ. ಗಾಯಾಳುಗಳಿಗೆ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಎಂದು ತಿಳಿಸಿದರು.

Bottom Add3
Bottom Ad 2

You cannot copy content of this page