Kannada NewsKarnataka NewsLatest

ಅಂಗಡಿ ಇಂಟರನ್ಯಾಷನಲ್ ಸ್ಕೂಲ್ ಶೇ.100 ಫಲಿತಾಂಶ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನಗರದ ಅಂಗಡಿ ಇಂಟರನ್ಯಾಷನಲ್ ಸ್ಕೂಲಿನ ವಿದ್ಯಾರ್ಥಿಗಳು ಸಿಬಿಎಸ್‌ಇ ೧೦ನೇ ತರಗತಿಯ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಶಾಲೆಯ ಒಟ್ಟು ಫಲಿತಾಂಶ ಶೇ. ೧೦೦ ಆಗಿದೆ. ಅಥರ್ವ ಪಾಟೀಲ -ಶೇ. ೯೪.೪೦ ಪ್ರಥಮ, ತಿರುಮಲ ಶ್ರೀನಿವಾಸ- ಶೇ.೮೭.೬೦ ದ್ವಿತಿಯ ಮತ್ತು ನಿಖಿಲ್ ಕಾಡಾಪುರೆ-ಶೇ. ೮೫.೪೦ ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್, ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಸಂಸ್ಥೆಯ ನಿರ್ದೇಶಕಿ ಡಾ. ಸ್ಪೂರ್ತಿ ಪಾಟೀಲ, ಆಡಳಿತಾಧಿಕಾರಿ ರಾಜು ಜೋಶಿ, ಮುಖ್ಯಾಧ್ಯಾಪಕಿ ಆಶಾ ರಜಪೂತ, ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button