Belagavi NewsBelgaum NewsKannada NewsKarnataka News
*ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಹಾಲು ಪೌಡರ್ ಪೂರೈಕೆ ಸ್ಥಗಿತ; ಪರ್ಯಾಯ ವ್ಯವಸ್ಥೆಗೆ ಕ್ರಮ – ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಎಂಎಫ್ ಹಾಲು ಪೂರೈಕೆ ಸ್ಥಗತಗೊಳಿಸಿದ್ದರಿಂದ ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಹಾಲು ವಿತರಣೆ ಸ್ಥಗಿತವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಹಾಲಿನ ಬೆಲೆ ಹೆಚ್ಚಾಗಿದೆ, ಹಿಂದಿನ ಬೆಲೆಯಲ್ಲಿ ಹಾಲಿನ ಪೌಡರ್ ಕೊಡಲು ಸಾಧ್ಯವಿಲ್ಲ ಎಂದು ಕೆ ಎಂ ಎಫ್ ನವರು ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳಿಂದ ನನ್ನ ಇಲಾಖೆಗೆ ಹಾಲು ಪೂರೈಕೆಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ.
ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಪೌಷ್ಠಿಕ ಆಹಾರ ನೀಡಬೇಕು ಎಂಬುದು ನಮ್ಮ ಉದ್ದೇಶ. ಹಾಲಿನ ಪೌಡರ್ ನೀಡಲಾಗದಿದ್ದರೆ ಬೇರೆ ಪೌಷ್ಠಿಕ ಆಹಾರ ಕೊಡುವ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ