ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ನೇಮಕ ಪೂರ್ಣಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ 4180 ಹುದ್ದೆಗಳು ಹಾಗೂ ಸಹಾಯಕಿಯರ 9411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು ಎಂದರು.
ನಗರ ಪ್ರದೇಶದಲ್ಲಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಸೂಚಿಸಿದ ಸಿಎಂ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ