Kannada NewsKarnataka NewsLatest

*ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ*

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಚಿವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Home add -Advt


ಆರೋಗ್ಯ ಇಲಾಖೆಯ ಇ-ಸರ್ವೇ ಕೆಲಸದಿಂದ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ನಿಯೋಗ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಇದೇ ವೇಳೆ ಮಾತನಾಡಿದ ಸಚಿವರು, ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು. ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದರು. ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರ ರಾಜ್ಯಾಧ್ಯಕ್ಷರಾದ ಅಮ್ಜದ್, ಪ್ರಧಾನ ಕಾರ್ಯದರ್ಶಿ ಜಯಮ್ಮ, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಜ ಉಪಸ್ಥಿತರಿದ್ದರು.

Related Articles

Back to top button