Kannada NewsKarnataka NewsLatest
ಆಸ್ಪತ್ರೆಯಿಂದ ಅನಿಲ ಬೆನಕೆ ಬಿಡುಗಡೆ: ಜನರಲ್ಲಿ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇಲ್ಲಿಯ ಕೆಎಲ್ಇ ಸಂಸ್ಥೆಯ ಆಸ್ಪತ್ರೆಗೆ ಬೆನಕೆ ಮತ್ತು ಅವರು ಕುಟುಂಬ ಕೊರೋನಾ ಸೋಂಕಿನಿಂದಾಗಿ ದಾಖಲಾಗಿತ್ತು.
ಆಸ್ಪತ್ರೆಯಲ್ಲಿ ತಮಗೆ ಉತ್ತಮ ಚಿಕಿತ್ಸೆ ನೀಡಿದ್ದಕ್ಕಾಗಿ ಅಲ್ಲಿನ ಸಿಬ್ಬಂದಿಯನ್ನು ಬೆನಕೆ ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದರು.
ಜನರು ಧೈರ್ಯದಿಂದ ಇರಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕೊರೋನಾ ಬರದಂತೆ ಎಲ್ಲ ರೀತಿಯ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.




