
ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ ಸಾವಂತನನ್ನು ಪೊಲೀಸರು ಗುರುವಾರ ತಡರಾತ್ರಿ ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿಶ್ವ ಅಲಿಯಾಸ್ ಗಿರೀಶ ಸಾವಂತ ದಾವಣಗೆರೆಗೆ ಪಲಾಯನ ಮಾಡಿದ್ದ. ಅಲ್ಲಿ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೀಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಗಲ್ಲಿಗೇರಿಸುವಂತೆ ಅಥವಾ ಎನ್‌ಕೌಂಟರ್ ಮಾಡುವಂತೆ ಆಗ್ರಹಿಸಿ ನಿನ್ನೆ ಅಂಜಲಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ