Kannada NewsKarnataka NewsPolitics

*ಅಂಜಲಿ ಪ್ರಕರಣ ಸಿಐಡಿಗೆ ಹಸ್ತಾಂತರ: ಗೃಹ ಸಚಿವ ಪರಮೇಶ್ವರ*

ಪ್ರಗತಿವಾಹಿನಿ ಸುದ್ದಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಿಐಡಿ ತನಿಖೆಗೆ ನೀಡಲಾಗಿದ್ದು, ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಸಿಬಿಐಗೆ ಕೊಡಲ್ಲ ಎಂದು ಹುಬ್ಬಳ್ಳಿಯಲ್ಲಿ ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ.‌

ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಎರಡು ಕೊಲೆಗಳು ನಡೆದಿರುವುದು ದುರದೃಷ್ಟಕರ. ಅಂಜಲಿ ಕೊಲೆ ಆರೋಪಿ ಗಿರೀಶ್ ಪೊಲೀಸರ ವಶದಲ್ಲಿದ್ದು, ತನಿಖೆ ನಡೆಯುತ್ತಿದೆ. ಆರೋಪಿಗೆ ಶಿಕ್ಷೆ ಆಗಬೇಕು. ಹೀಗಾಗಿ ಪೊಲೀಸ್ ಇಲಾಖೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ನೇಹಾದಂತೆ ಅಂಜಲಿ ಕೊಲೆ ಕೂಡ ಗಂಭೀರ ಪ್ರಕರಣ. ಕೊಲೆಯಾದ ಅಂಜಲಿ ಅಂಬಿಗೇರ ಕುಟುಂಬ ಕಡುಬಡತನದಲ್ಲಿದೆ ಎಂದರು.

ರಾಜ್ಯದ ಪೊಲೀಸರು ಸಮರ್ಥರಿದ್ದಾರೆ, ನೇಹಾ ಹಿರೇಮಠ್ ಪ್ರಕರಣವನ್ನು ಸಿಬಿಐಗೆ ಕೊಡಲ್ಲ. ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ. ಕೆಲವು ಬಾರಿ ಹೊರಗಿನವರಿಂದ ತನಿಖೆ ಆಗಬೇಕು. ಹೀಗಾಗಿ ಅಂಜಲಿ ಪ್ರಕರಣ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್​ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button