Kannada NewsKarnataka News

*ಅಂಜಲಿ ಕೊಲೆ ಪ್ರಕರಣ: ಎಸಿಪಿ ವಿಜಯ್ ಕುಮಾರ್ ಅಮಾನತು*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಈಗಾಗಲೆ ಮೂರು ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದ್ದು, ಈಗ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

Home add -Advt

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂದಿಸಿದಂತೆ ಹಾಗೂ ವಿವಿಧ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ದಕ್ಷಿಣ ಉಪವಿಭಾಗದ ಎಸಿಪಿ ವಿಜಯ್ ಕುಮಾರ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ.

ನಿನ್ನೆ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಹತ್ಯೆ ಬಗ್ಗೆ ಮಾಹಿತಿ ಪಡೆದ ಗೃಹಸಚಿವ ಡಾ.ಜಿ.ಪರಮೇಶ್ವರ್ ಈ ಹತ್ಯೆ ಹಿಂದೆ ಪೊಲೀಸ್ ಅಧಿಕಾರಿಗಳ ಕರ್ತವ್ಯ ಲೋಪ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಂಡಿದ್ದಾರೆ.

Related Articles

Back to top button