ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ನಿರ್ಲಕ್ಷ ವಹಿಸಿದ್ದ ಆರೋಪದ ಮೇಲೆ ಈಗಾಗಲೇ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ಕಾನ್ಸ್ಟೆಬಲ್ ಅವರನ್ನು ಅಮಾನತು ಮಾಡಲಾಗಿತ್ತು. ಈಗ ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ.
ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ಅಮಾನತಾದ ಅಧಿಕಾರಿಯಾಗಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಅಂಜಲಿ ಕುಟುಂಬದವರು ಹೋಗಿ ಮಾಹಿತಿ ನೀಡಿದ ಬಳಿಕವೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಅವರು ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ರೇಖಾ ಹಾವರಡ್ಡಿ ಅವರನ್ನು ಅಮಾನತು ಮಾಡಿದ್ದರು. ಇನ್ನು ಈ ಪ್ರಕರಣದಲ್ಲಿ ಅನೇಕ ಅಧಿಕಾರಿಗಳ ಮೇಲೆ ಕ್ರಮ ಕೈಗೋಳ್ಳುವ ಸಾದ್ಯತೆ ಇದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ