ಪ್ರಗತಿವಾಹಿನಿ ಸುದ್ದಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಹಿನ್ನಲೆಯಲ್ಲಿ ಬೆಂಡಿಗೇರಿ ಠಾಣೆ ಇನ್ಸ್ ಪೆಕ್ಟರ್ ಮತ್ತು ಮಹಿಳಾ ಕಾನ್ಸ್‌ಟೇಬಲ್ ಅನ್ನು ಅಮಾನತು ಮಾಡಲಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ನಗರ ಪೊಲೀಸ್ ಆಯುಕ್ತೆ ರೇಣುಕಾ ಮಾಹಿತಿ ನೀಡಿದ್ದಾರೆ.
ಅಂಜಲಿಗೆ ಜೀವ ಬೆದರಿಕೆ ಇದೆ ಎಂದು ಅಂಜಲಿ ಅಂಬಿಗೇರ ಅಜ್ಜಿ ಬೆಂಡಿಗೇರಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ್ದರೂ ಪೊಲೀಸರು ನಿರ್ಲಕ್ಷಿಸಿದ್ದ ಆರೋಪ ಕೇಳಿಬಂದಿತ್ತು. ಹೀಗಾಗಿ ಬೆಂಡಿಗೇರಿ ಠಾಣೆ ಇನ್ಸ್‌ಪೆಕ್ಟರ್ ಚಂದ್ರಶೇಖರ ಬಿ.ಚಿಕ್ಕೋಡಿ, ಕಾನ್ಸ್ ಟೇಬಲ್ ರೇಖಾ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ಆರೋಪಿ ವಿಶ್ವ ಒಂದು ವಾರದ ಹಿಂದೆಯೇ ಅಂಜಲಿಗೆ ಜೀವ ಬೆದರಿಕೆ ಹಾಕಿದ್ದು, ನನ್ನ ಜೊತೆಗೆ ಬಾರದಿದ್ದರೆ ನೇಹಾ ತರ ಕೊಲೆ ಮಾಡುತ್ತೇನೆ ಎಂದು ವಾರ್ನಿಂಗ್ ಮಾಡಿದ್ದ ಎನ್ನಲಾಗಿದೆ. ಕೂಡಲೇ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆದರೆ ಪೊಲೀಸರು ಅಂಜಲಿ ಕುಟುಂಬಸ್ಥರಿಗೆ ಬೈದು ನಿಮ್ಮದು ಮೂಢನಂಬಿಕೆ ಹಾಗೇನು ಆಗಲ್ಲ ಹೋಗಿ ಅಂತ ನಿರ್ಲಕ್ಷ್ಯ ತೋರಿಸಿದ್ದರು. ಆ ಹಿನ್ನೆಲೆಯಲ್ಲಿ ಇದೀಗ ಅವರನ್ನು ಅಮಾನತ್ತು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ