Kannada NewsKarnataka NewsLatest
ನರೇಗಾ ಕಾರ್ಮಿಕರಿಗೆ ಮಾಸ್ಕ್ ಮತ್ತು ಸಾಬೂನು ವಿತರಿಸಿದ ಅಂಜಲಿ ನಿಂಬಾಳಕರ್

ಪ್ರಗತಿವಾಹಿನಿ ಸುದ್ದಿ, ಕಕ್ಕೇರಿ: ಖಾನಾಪುರ ತಾಲೂಕಿನ ಭುರಣಕಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನರೆಗಾ ಕೆಲಸದಲ್ಲಿರುವ ಮಹಿಳೆಯರಿಗೆ ಕೊರೊನಾ ವೈರಸ್ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲು ಶಾಸಕಿ ಡಾ.ಅಂಜಲಿತಾಯಿ ಹೇಮಂತ ನಿಂಬಾಳಕರ ಅವರು ಡಾ.ಅಂಜಲಿತಾಯಿ ಫೌಂಡೇಶನ್ ವತಿಯಿಂದ ಮಾಸ್ಕ್ ಮತ್ತು ಸಾಬೂನುಗಳನ್ನು ವಿತರಣೆ ಮಾಡಿದರು.
ಕೆಲಸ ನಡೆದ ಸ್ಥಳಕ್ಕೆ ಭೇಟಿ ಕೊಟ್ಟು, ಕೊರೊನಾ ಬಗ್ಗೆ ಒಬ್ಬ ವೈದ್ಯರಾಗಿ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಭುರಣಕಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.




