Latest

ಅಂಜನಾದ್ರಿ ಐತಿಹಾಸಿಕ, ಧಾರ್ಮಿಕ ಪ್ರವಾಸೀ ತಾಣವಾಗುವ ಪರಿಕಲ್ಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಐತಿಹಾಸಿಕ, ಧಾರ್ಮಿಕ ಪ್ರವಾಸೀ ತಾಣವಾಗಬೇಕೆನ್ನುವುದು ನಮ್ಮ ಪರಿಕಲ್ಪನೆ.ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆನೆಗುಂದಿಯಲ್ಲಿ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಮಗಾರಿಗೆ ಒಟ್ಟು 125 ಕೋಟಿ ರೂ.ಗಳ ಅನುಮೋದನೆ ದೊರೆತಿದೆ. ಮೊದಲನೇ ಹಂತದ ಯೋಜನೆ ಹಾಗೂ ಜಮೀನು ದೊರೆತಿರುವಲ್ಲಿ ಕೆಲಸ ಪ್ರಾರಂಭಸಲಾಗಿದೆ. ಭಕ್ತರು ಉಳಿದುಕೊಳ್ಳಲು ಡಾರ್ಮಿಟರಿ , ಪ್ರದಕ್ಷಿಣಾ ಪಥ, ಶಾಪಿಂಗ್ ಕಾಂಪ್ಲೆಕ್ಸ್ ಶೌಚಾಲಯ ನಿರ್ಮಾಣ ಮಾಡಲಾಗುವುದು . ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದಾದ ಕೂಡಲೇ ರೋಪ್ ವೇ ಮತ್ತಿತರ ಕಾಮಗಾರಿಗಳನ್ನು ಕೈಗೆಟ್ಟಿಕೊಳ್ಳಲಾಗುವುದು ಎಂದರು.

ಸೌಭಾಗ್ಯ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಇಲ್ಲಿ ಆಂಜನೇಯನ ಜನ್ಮಸ್ಥಳದ ಅಭಿವೃದ್ಧಿ ಮಾಡುವ ಸೌಭಾಗ್ಯ ಬಿಜೆಪಿ ಸರ್ಕಾರಕ್ಕೆ ದೊರೆತಿರುವುದು ಸಂತಸ ತಂದಿದೆ ಎಂದರು.

ಆಶೀರ್ವಾದ
ಅಂಜನಾದ್ರಿಯ ಆಂಜನೇಯ ಇಡೀ ಮನುಕುಲಕ್ಕೆ ಆಶೀರ್ವಾದ ಮಾಡಲಿ. ಭಾರತ ಹಾಗೂ ಕನ್ನಡ ನಾಡಿನ ಸಮಸ್ತ ಜನಕ್ಕೆ ಆಶೀರ್ವಾದ ಮತ್ತು ರಕ್ಷಣೆ ಮಾಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ
ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಬಳಸಲು ಟೋಲ್ ರದ್ದುಪಡಿಸಲು ಪ್ರತಿಭಟನೆ ಆಗುತ್ತಿರುವ ಬಗ್ಗೆ ಮಾತನಾಡಿ ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಯವರೊಂದಿಗೆ ಮಾತನಾಡಿದ್ದು, ವಿವರಗಳನ್ನು ಕೇಳಿದ್ದಾರೆ. ಪ್ರತಿ ಬಾರಿ ಟೋಲ್ ಪ್ರಾರಂಭವಾದಾಗ ಈ ವಿಚಾರ ಇದ್ದೇ ಇರುತ್ತದೆ. ವಿಚಾರಗಳನ್ನು ಜನರಿಗೆ ಹೇಳಿ ಸಮಾಧಾನ ಮಾಡಿ ಕ್ರಮ ವಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button