ಪ್ರಗತಿ ವಾಹಿನಿ ಸುದ್ದಿ ಬೆಳಗಾವಿ – ರಾಮದುರ್ಗ ತಾಲೂಕಿನಲ್ಲಿ ರುಬೆಲ್ಲಾ ಚುಚ್ಚು ಮದ್ದು ಪಡೆದ ಮೂವರು ಮಕ್ಕಳು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸಾಲಹಳ್ಳಿ ಪಿಎಚ್‌ಸಿಯ ಎಎನ್‌ಎಂ ಮತ್ತು ಫಾರ‍್ಮಾಸಿಸ್ಟ್ ಅನ್ನು ಅಮಾನತ್ ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ವಿ. ಮುನ್ಯಾಳ ಅವರು ಆದೇಶ ಹೊರಡಿಸಿದ್ದಾರೆ.
ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಚುಚ್ಚು ಮದ್ದಿನ ಮಾದರಿಯನ್ನು ಹಿಮಾಚಲ ಪ್ರದೇಶದ ವಾಕ್ಸಿನ್ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿದ್ದೇವೆ. ಅಲ್ಲದೆ ಆರ್‌ಸಿಎಚ್‌ಒ ಅಧಿಕಾರಿ ನೀಡಿದ ಪ್ರಾಥಮಿಕ ತನಿಖೆಯ ವರದಿಯ ಆಧಾರದಲ್ಲಿ ಸಾಲಹಳ್ಳಿ ಪಿಎಚ್‌ಸಿಯ ಎಎನ್‌ಎಂ ಮತ್ತು ಫಾರ್ಮಾಸಿಸ್ಟ್‌ರನ್ನು ಅಮಾನತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯಿತ್ತಿರುವ ಇಬ್ಬರು ಮಕ್ಕಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಹಿರಿಯ ಅಧಿಕಾರಿಗಳಿಂದ ತನಿಖೆ
ರುಬೆಲ್ಲಾ ಚುಚ್ಚು ಮದ್ದನ್ನು ಪಿಎಚ್‌ಸಿಗೆ ಮರಳಿ ತಂದಿಡುವ ಬದಲು ಆರೋಗ್ಯ ಸಿಬ್ಬಂದಿ ಹೋಟೆಲ್ ಫ್ರಿಡ್ಜ್‌ನಲ್ಲಿ ಇಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಯ ತನಿಖೆಗೆ ಸರಕಾರ, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಯನ್ನು ನೇಮಕ ಮಾಡಿದೆ.
ಘಟನೆಯ ಸಂಪೂರ್ಣ ತನಿಖೆಗೆ ಒತ್ತಾಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು, ಈ ರೀತಿಯ ಘಟನೆ ಮರುಕಳಿಸದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ಮೂವರು ಮಕ್ಕಳು ಸಾವು ಪ್ರಕರಣ; ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ