
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ರೋಗಿಗಳ ಆರೋಗ್ಯ ವಿಚಾರಿಸಿ, ಸ್ವಚ್ಛತೆಯನ್ನು ಕಾಪಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಸ್ಪತ್ರೆಗೆ ಅವಶ್ಯಕತೆ ಇರುವ ಸೌಲಭ್ಯವನ್ನು ಒದಗಿಸಲಾಗುವುದು. ಸಂಸದರ ನಿಧಿಯಲ್ಲಿ ಆಸ್ಪತ್ರೆಯ ಆವರಣದಲ್ಲಿ ಫ್ಲೇವರ್ ಬ್ಲಾಕ್ ಅಳವಡಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿಗಳಾದ ಡಾ. ವಿಠ್ಠಲ್ ಶಿಂಧೆ ಹಾಗೂ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಹಾಶಿವರಾತ್ರಿ: ಶಿವನಾಮ ಜಪ ಮಾಡಿ ಪೂಜೆ ಸಲ್ಲಿಸಿದ ಸಚಿವೆ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ