ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿಲ್ಲಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ 42 ಜನರಿಗೆ ರೂ. 50.40 ಲಕ್ಷ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 120 ಜನರಿಗೆ ರೂ. 27.82 ಲಕ್ಷ ಹಾಗೂ ಸಂಸದರ ಶಿಫಾರಸ್ಸಿನ ಮೂಲಕ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡತನ ರೇಖೆಗಿಂತ ಕೆಳಗೆ ಇರುವ ಜನರಿಗೆ ಆಸ್ಪತ್ರೆ ವ್ಯಧ್ಯಕೀಯ ಚಿಕಿತ್ಸೆಗಾಗಿ ಅನುದಾನ ಮಂಜೂರು ಪಡೆದು ಅನುಕೂಲ ಕಲ್ಪಿಸಲಾಗಿದೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಸನ್ಮಾನ್ಯ ಪ್ರಧಾನ ಮಂತ್ರಿ, ನರೇಂದ್ರ ಮೋದಿಜೀ ಯವರು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆಯವರ ಶಿಫಾರಸ್ಸಿನ ಮೇರೆಗೆ ಕಳೆದ 15 ದಿನಗಳಲ್ಲಿ 4 ಜನರಿಗೆ ರೂ. 12 ಲಕ್ಷ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ ಹಾಗೂ ಸಂಸದರಿಗೆ ಕೊವಿಡ್ ಪರಿಸ್ಥಿತಿಯಲ್ಲಿ ದೇಶದಲ್ಲಿಯೇ ಅತೀ ಹೆಚ್ಚು ಮೊತ್ತವನ್ನು ಮಂಜೂರು ಮಾಡಲಾದ ಸಂಸದರಲ್ಲಿ ನಾನೊಬ್ಬನಾಗಿದೇನೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ತಿಳಿಸಿದ್ದಾರೆ.
1.48 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ