*ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತು: ರೈಸ್ ಮಿಲ್ ಮಾಲೀಕನ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಡವರಿಗೆ ಸೇರಬೇಕಾದ ಅನ್ನಭಾಗ್ಯ ಯೋಜನೆಯ ಅಕ್ಕಿ ಬಡವರಿಗೆ ಸೇರುವ ಬದಲು ಕಾಳ ಸಂತೆಯಲ್ಲಿ ಮಾರಾಟ ಆಗುತ್ತಿರುವ ಅನೇಕ ಘಟನೆಗಳು ಬೆಳಕಿಗೆ ಬಂದಿದೆ. ಆದರೆ ಅನ್ನಭಾಗ್ಯ ಅಕ್ಕಿಗೆ ಸಂಬಂಧಿಸಿದಂತೆ ಆಘಾತಕಾರಿ ವಿಚಾರವೊಂದು ಹೊರ ಬಿದ್ದಿದೆ.
ಹೌದು. ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಬಾರದು ಎಂಬ ಕಟುವಾದ ನಿಯಮ ಇದ್ರು, ಖದಿಮರು ಮಾರಟ ಮಾಡುವದನ್ನು ಮುಂದು ವರೆಸುತಿದ್ದಾರೆ. ಆದರೆ ಕೊಪ್ಪಣ ಜಿಲ್ಲೆಯ ಗಂಗಾವತಿಯಲ್ಲಿ ಅನ್ಯಭಾಗ್ಯ ಯೋಜನೆಯ ಅಕ್ಕಿಯನ್ನು ಜನರ ಬದಲಿಗೆ ವಿದೇಶಕ್ಕೆ ಕಳುಹಿಸಲಾಗುತ್ತಿದೆ ಎಂಬ ಗಂಭಿರ ಆರೋಪ ಕೇಳಿ ಬಂದಿದೆ.
ಗಂಗಾವತಿಯ ರೈಸ್ ಮಿಲ್ ನಲ್ಲಿ ಮಾಲೀಕ ಸರಿಯಾದ ಲೆಕ್ಕ ನೀಡದೇ ತಪ್ಪು ಮಾಹಿತಿಯನ್ನು ನೀಡಿದ್ದಾನೆ. ಅಲ್ಲದೆ ಅಕ್ಕಿಯನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಿಸಲಾಗಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಹೀಗಾಗಿ ಉಮಾಶಂಕರ್ ರೈಸ್ ಮಿಲ್ ಮಾಲೀಕನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಅಕ್ರಮ ಅಕ್ಕಿ ಸಾಗಾಟ ಆರೋಪಕ್ಕೆ ಸಂಬಂಧಪಟ್ಟಂತೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಎಫ್‌ಐಆರ್ ನಲ್ಲಿ ಉಮಾಶಂಕರ್ ರೈಸ್ ಮಿಲ್ ಮಾಲೀಕ ಉಮೇಶ್ ಸಿಂಗನಾಳ ಎಂಬಾತನ ಹೆಸರನ್ನು ಉಲ್ಲೇಖಿಸದೆ ಕೇವಲ ಉಮಾಶಂಕರ್ ರೈಸ್ ಮಿಲ್ ಮಾಲೀಕ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಗೋದಾಮು ಮ್ಯಾನೇಜರ್ ಸೋಮಶೇಖರ್ ರೈಸ್ ಮಿಲ್ ಮಾಲೀಕ, ಲಾರಿ ಚಾಲಕ ಹಾಗೂ ಕ್ಲಿನರ್ ವಿರುದ್ಧ ಇದೀಗ FIR ದಾಖಲಾಗಿದೆ.
ಇನ್ನು ಈ ಬಗ್ಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗೆ ಮಾತನಾಡಿದ್ದು, ಗಂಗಾವತಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ನಡೆದಿರುವುದು ಗಮನಕ್ಕೆ ಬಂದಿದೆ. ಇದರಲ್ಲಿ ರೈಸ್ ಮಿಲ್ ಮಾಲೀಕನ ಕೈವಾಡ ಇದೆ ಎಂದು ಹೇಳಲಾಗಿದೆ. ಒಂದು ವೇಳೆ ಅಧಿಕಾರಿಗಳು ಕೂಡ ಇದರಲ್ಲಿ ಬಾಗಿಯಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.