Uncategorized

*ಅಕ್ಕಿ ವಿಳಂಬವಾಯ್ತು ಅದ್ಕೆ ಹಣ ಕೊಡಲು ಹೇಳಿದ್ದೇನೆ ಎಂದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನ್ನಭಾಗ್ಯ ಯೋಜನೆ ವಿಳಂಬವಾಯ್ತು ಹಾಗಾಗಿ ಹಣ ಕೊಡಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

5ಕೆಜಿ ಹೆಚ್ಚುವರಿ ಅಕ್ಕಿ ಬದಲು ಹಣ ನೀಡಲು ಹೇಳಿದ್ದೇನೆ. ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ ಹಾಗಾಗಿ ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡುತ್ತೇವೆ ಎಂದು ಹೇಳಿದರು.

Home add -Advt

ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ 5 ಕೆಜಿ ಅಕ್ಕಿ ಕೊಡಲು ಆಗಿಲ್ಲ ಹಾಗಾಗಿ ಬಿಪಿಎಲ್ ಕಾರ್ಡ್ ದಾರರ ಖಾತೆಗೆ ಹಣ ಹಾಕುತ್ತಿದ್ದೇವೆ . ಎಷ್ಟೇ ಕಷ್ಟ ಆದರೂ ನಾವು ಕೊಟ್ಟ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ತಿಳಿಸಿದರು.

ಕೇವಲ ರಾಜಕೀಯ ಮಾಡಬೇಕು ಎಂಬ ಕಾರಣಕ್ಕೆ ಬಿಜೆಪಿ ನಾಯಕರು ನಮ್ಮ ಯೋಜನೆಗಳನ್ನು ಟೀಕಿಸುವುದು ಸರಿಯಲ್ಲ ಎಂದು ಹೇಳಿದರು.

Related Articles

Back to top button