ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ಅಕ್ಕಿ ಅನ್ನಭಾಗ್ಯ ಯೋಜನೆಯ ನೇರ ಹಣ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಯೋಜನೆಯ ಲೋಗೋ ಬಿಡುಗಡೆ ಮಾಡಲಾಯಿತು. ಈ ವೇಳೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾಂಗ್ರೆಸ್ ಸರ್ಕಾರ ಬಿಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿತ್ತು. ಆದರೆ ಅಕ್ಕಿ ಕೊರತೆ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿ ನೀಡಲಾಗುತ್ತಿದ್ದು, ಉಳಿದ 5ಕೆಜಿ ಅಕ್ಕಿ ಬದಲಾಗಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ 170 ರೂಪಾಯಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಿದೆ.
ಮೈಸೂರು, ಕೋಲಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಯೋಜನೆಗೆ ಚಾಲನೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ