Uncategorized

*ಇಂದಿನಿಂದಲೇ ಅಕ್ಕಿ ಹಣ ಕೊಡುತ್ತೇವೆ ಎಂದ ಸಚಿವ ಮುನಿಯಪ್ಪ; ಇಂದಲ್ಲ ಜುಲೈ 10ರಿಂದ ಕೊಡ್ತೀವಿ ಎಂದ ಮುಖ್ಯಮಂತ್ರಿಗಳು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆಜಿ ಅಕ್ಕಿ ಬದಲಾಗಿ ಹಣ ನೀಡುವ ವಿಚಾರದಲ್ಲಿ ಗೊಂದಲ ಮುಂದುವರೆದಿದೆ. ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಒಂದು ಹೇಳಿಕೆ ನೀಡುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಹೇಳಿಕೆ ನೀಡಿದ್ದಾರೆ.

ದೇವನಹಳ್ಳಿಯಲ್ಲಿ ಮಾತನಾಡಿದ ಆಹಾರ ಸಚಿವ ಮುನಿಯಪ್ಪ, 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿಗೆ ಬದಲಾಗಿ ಇಂದಿನಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಹಾಕುವ ಪ್ರಕ್ರಿಯೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡ್ ನಲ್ಲಿ ಹೆಸರಿರುವ ಪ್ರತಿಯೊಬ್ಬರಿಗೂ ತಲಾ 170 ರೂಪಾಯಿ ನೀಡುತ್ತೇವೆ. 5ಕೆಜಿ ಅಕ್ಕಿ ಜೊತೆಗೆ 5 ಕೆಜಿ ಅಕ್ಕಿಗೆ ಹಣ ನೀಡುತ್ತೇವೆ. 1.29 ಲಕ್ಷ ಬಿಪಿಎಲ್ ಕಾರ್ಡ್ ದಾರರ ಖಾತೆಗೆ ಹಣ ಹಾಕುತ್ತೇವೆ. 10 ದಿನದವರೆಗೆ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಹಾಕಲಾಗುತ್ತದೆ. ಶೇ.90ರಷ್ಟು ಬಿಪಿಎಲ್ ಕಾರ್ಡ್ ದಾರರ ಅಕೌಂಟ್ ಲಿಂಕ್ ಆಗಿದೆ. ಬ್ಯಾಂಕ್ ಖಾತೆ ಇಲ್ಲದವರು ಖಾತೆ ಮಾಡಿಸಏಕು ಎಂದು ಹೇಳಿದರು.

ಇದೇ ವೇಳೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೆಚ್ಚುವರಿ ಅಕ್ಕಿಗೆ ಹಣ ಕೊಡುತ್ತೇವೆ ಎಂದು ಹೇಳಿದ್ದೆವೆ. ಆದರೆ ಜುಲೈ 1ರಿಂದಲೇ ಕೊಡುತ್ತೇವೆ ಎಂದು ಹೇಳಿಲ್ಲ. ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರುವಾಗಲಿದೆ ಎಂದರು.

1 ಕೋಟಿ 28 ಲಕ್ಷ ಕಾರ್ಡ್ ಗಳ ಪೈಕಿ 99.99% ಆಧಾರ್ ಸೀಡಿಂಗ್ ಆಗಿದೆ. 1 ಕೋಟಿ 22 ಲಕ್ಷ ಕಾರ್ಡ್ ಗಳಿಗೆ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ. ಬಾಕಿ ಉಳಿದಿರುವ 6 ಲಕ್ಷ ಕಾರ್ಡ್ ಗಳು ಆಧಾರ್ ಲಿಂಕ್ ಆಗಬೇಕು ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button