
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರಿಗೆ ವೈ ಶ್ರೇಣಿ ಭದ್ರತೆ ಕಲ್ಪಿಸಲಾಗಿದೆ.
ಖಡಕ್ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದರು. ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಅಣ್ಣಾಮಲೈ ಪ್ರಸ್ತುತ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದಾರೆ. ಅಣ್ಣಾಮಲೈ ಅವರಿಗೆ ಭದ್ರತೆ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ತಮಿಳುನಾಡು ಸರ್ಕಾರ ವೈ ಶ್ರೇಣಿ ಭದ್ರತೆ ಕಲ್ಪಿಸಿದೆ.
ಅಣ್ಣಾಮಲೈ ಅವರಿಗೆ ಮಾವೋವಾದಿಗಳು, ಧಾರ್ಮಿಕ ಉಗ್ರರಿಂದ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ವೈ ಶ್ರೇಣಿ ಭದ್ರತೆ ಕಲ್ಪಿಸಲಾಗಿದೆ. ದಿನದ 24 ಗಂಟೆಗಳ ಕಾಲ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಶಸ್ತ್ರ ಅಧಿಕಾರಿಗಳು ಮತ್ತು ತಮಿಳುನಾಡು ಪೊಲೀಸರು ಅಣ್ಣಾಮಲೈಗೆ ರಕ್ಷಣೆ ನೀಡಲಿದ್ದಾರೆ.
ವಿದ್ಯುತ್ ಕಂಬಕ್ಕೆ ವ್ಯಾನ್ ಡಿಕ್ಕಿ; 7 ಜನರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ