Politics

*ಕೇಂದ್ರ ಸಚಿವೆ ಅನ್ನಪೂರ್ಣಾ ದೇವಿ ಅಧ್ಯಕ್ಷತೆಯಲ್ಲಿ ಸಭೆ* * ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರುಗಳ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದರು.

ಇಲಾಖೆ ವತಿಯಿಂದ ಕರ್ನಾಟಕದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು. ಇಲಾಖೆಯ ಪ್ರಗತಿ ಕುರಿತು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದ ಸಚಿವರು, ಜೊತೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಎಲ್ಲಾ ಅನುದಾನದ ಕುರಿತು ಮತ್ತೊಮ್ಮೆ ಸದರಿ ಸಭೆಯಲ್ಲಿ ಪ್ರಸ್ತಾಪ ಮಾಡಿದರು.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಉಪಸ್ಥಿತರಿದ್ದರು.

Home add -Advt

Related Articles

Back to top button