Belagavi NewsBelgaum NewsKannada NewsKarnataka NewsPolitics

*ಅಧಿಕಾರಿಗಳ ಸಭೆ ನಡೆಸಿದ ಅಣ್ಣಾ ಸಾಹೇಬ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಛೇರಿಯಲ್ಲಿ ತಾಲೂಕು ನಿಯಂತ್ರಣ ಅಧಿಕಾರಿಗಳು,(Taluk Controlling Officer )ಮತ್ತು ಬ್ಯಾಂಕ್ ನಿರೀಕ್ಷಕರ (Bank Inspector) ಸಭೆಯು ಬ್ಯಾಂಕ್ ಅಧ್ಯಕ್ಷರಾದ  ಅಣ್ಣಾಸಾಹೇಬ ಜೊಲ್ಲೆಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿಲ್ಲೆಯ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಮಸ್ಯೆಗಳನ್ನು ಬಗೆಹರಿಸುವ ಕುರಿತು, ಬ್ಯಾಂಕ ವತಿಯಿಂದ ಹೆಚ್ಚಿನ ಸಾಲ ಸೌಲಭ್ಯ ಒದಗಿಸುವ ಕುರಿತು ಹಾಗೂ ಗ್ರಾಹಕರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುವ ಕುರಿತು ಚರ್ಚಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕರಾದ ಅಪ್ಪಾಸಾಹೇಬ ಕುಲಗುಡೆ, ನೀಲಕಂಠ ಕಪ್ಪಲಗುದ್ದಿ, ಅಮರನಾಥ ಜಾರಕಿಹೊಳಿ, ಪ್ರಧಾನ ವ್ಯವಸ್ಥಾಪಕರಾದ ಎನ್.ಜಿ. ಕಲಾವಂತ, ಉಪಪ್ರಧಾನ ವ್ಯವಸ್ಥಾಪಕರು, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Home add -Advt

Related Articles

Back to top button