ಮತದಾರರಿಗೆ, ಕಾರ್ಯಕರ್ತರಿಗೆ ಜೊಲ್ಲೆ ಕೃತಜ್ಞತೆ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಅಣ್ಣಾ ಸಾಹೇಬ ಜೊಲ್ಲೆ ಕ್ಷೇತ್ರದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸೋತ ಮಾತ್ರಕ್ಕೆ ಜನರಿಂದ ದೂರ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ನನ್ನ ಮೇಲೆ ನಂಬಿಕೆ ಇರಿಸಿ ಮತದಾನ ಮಾಡಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮತದಾರರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಚುನಾವಣೆಯಲ್ಲಿ ಸೋತೆ ಎಂದ ಮಾತ್ರಕ್ಕೆ ನಿಮ್ಮಿಂದ ದೂರ ಉಳಿಯುವುದಿಲ್ಲ. ನಿರಂತವಾಗಿ ನಿಮ್ಮ ಸೇವೆಯಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳುತ್ತೇನೆ. ಚುನಾವಣೆ ಘೋಷಣೆಯಾದಾಗಿನಿಂದ ನಿರಂತರವಾಗಿ ಶ್ರಮ ವಹಿಸಿದ ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ, ಪದಾಧಿಕಾರಿಗಳಿಗೆ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನರಿಗೆ ಹಾಗೂ ಮಾಧ್ಯಮದವರಿಗೆ ಕೃತಜ್ಞತೆಗಳು ಎಂದು ಅವರು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ