Kannada NewsLatest

ಅಣ್ಣಾಸಾಹೇಬ ಜೊಲ್ಲೆ, ಶಶಿಕಲಾ ಜೊಲ್ಲೆ ಸಂತಾಪ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ

ಸಚಿವ ಉಮೇಶ ಕತ್ತಿ ನಿಧನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ ಜೊಲ್ಲೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಆಹಾರ ಮತ್ತು ಅರಣ್ಯ ಇಲಾಖೆ ಸಚಿವರಾಗಿದ್ದ  ಉಮೇಶ ಕತ್ತಿ ರವರು ಕ್ರೀಯಾಶೀಲ ನಾಯಕ, ಹಿರಿಯ ರಾಜಕಾರಣ , ಧೀಮಂತ ನಾಯಕ, ಸರಲ ಮತ್ತು ಸಜ್ಜನ್ನ ಮನೋಭಾವ ಹೊಂದಿದ್ದ, ಎಲ್ಲ ಕ್ಷೇತ್ರಗಳಲ್ಲಿ ತಮ್ಮದೆಯಾದ ಛಾಪು ಮೂಡಿಸಿದ ಇವರ ಅಕಾಲಿಕ ನಿಧನದಿಂದ ಬೆಳಗಾವಿ ಜಿಲ್ಲೆ ಅಲ್ಲದೇ ಇಡಿ ಕರ್ನಾಟಕ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ವರ್ಗಕ್ಕೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿ ಭಗವಂತನ್ನು ನೀಡಿ ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ.

-ಅಣ್ಣಾಸಾಹೇಬ ಜೊಲ್ಲೆ, ಸಂಸದರು ಚಿಕ್ಕೋಡಿ ಲೋಕಸಭಾ

Home add -Advt

ಸಂಪುಟ ಸಹದ್ಯೋಗಿಗಳು, ಆತ್ಮೀಯರು, ಹಾಗೂ ಪಕ್ಷದ ಹಿರಿಯ ನಾಯಕರು ಆಹಾರ ಮತ್ತು ಅರಣ್ಯ ಇಲಾಖೆ ಸಚಿವರಾದ ದಿವಗಂತ ಉಮೇಶ ಕತ್ತಿ ರವರು ನಿಧನದ ಸುದ್ದಿ ತಿಳಿದು ಮನಸಿಗೆ ಅತೀವ ದುಖವಾಗಿದೆ. ಸಚಿವರಾದ ದಿ. ಉಮೇಶ ಕತ್ತಿ ನಮ್ಮ ಜಿಲ್ಲೆಯವರು ಎಂದು ಹೇಳೂವುದಕ್ಕೆ ಅಭಿಮಾನವಿತ್ತು. ಅವರ ನಿಧನದಿಂದ ಬೆಳಗಾವಿ ಜಿಲ್ಲೆಗೆ ಹಾಗೂ ಈ ನಾಡಿಗೆ ರಾಜಕೀಯ ಹಾಗೂ ಸಹಕಾರ ಕ್ಷೇತ್ರಕ್ಕೆ ಅಪಾರ ಹಾನಿಯಾಗಿದೆ. ತಮ್ಮ ರಾಜಕೀಯ ಜೀವನದಲ್ಲಿ ೮ ಬಾರಿ ಶಾಸಕರಾಗಿ , ೪ ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸುವ ಮೂಲಕ ರಾಜ್ಯದಲ್ಲಿ ಅಭಿವ್ರದ್ದಿ ಪರ್ವಕ್ಕೆ ಕಾರಣರಾಗಿದ್ದರು. ಅವರ ಕುಟುಂಬ ವರ್ಗಕ್ಕೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿ ಭಗವಂತನ್ನು ನೀಡಿ ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ.

-ಶಶಿಕಲಾ ಜೊಲ್ಲೆ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು .

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button