Kannada NewsLatest

ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದ ಅಣ್ಣಾಸಾಹೇಬ ಜೊಲ್ಲೆ

ಅನರ್ಹ ಫಲಾನುಭವಿಗಳಿಗೆ ಪರಿಹಾಧನ ನೀಡಲು ನಿಯಮ ಬಾಹೀರ ಸರ್ವೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಒಳಪಡುವ ಅಥಣಿ, ಕಾಗವಾಡ, ರಾಯಬಾಗ, ಕುಡಚಿ, ಚಿಕ್ಕೋಡಿ-ಸದಲಗಾ, ನಿಪ್ಪಾಣಿ ಹುಕ್ಕೇರಿ, ಯಮಕನಮರಡಿ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಸರಕಾರದ ನಿಯಮಾವಳಿಗಳನ್ವಯ ಪ್ರವಾಹ / ಅತೀವೃಷ್ಟಿಯಿಂದ ಹಾನಿಗೊಳಗಾದ ಅರ್ಹ ಸಂತ್ರಸ್ತ ಕುಟುಂಬಗಳಿಗೆ ಸರಕಾರದಿಂದ ಪರಿಹಾರ ಧನ ನೀಡುವ ಉದ್ದೇಶದಿಂದ ಮನೆಗಳ ಹಾನಿ ಹಾಗೂ ಬೆಳೆಹಾನಿ ಕುರಿತು ಸರ್ವೆ ಕಾರ್ಯ ನಡೆಸಿ ವಿವರಗಳನ್ನು ಕ್ರೋಡಿಕರಿಸಲಾಗುತ್ತಿದೆ. ಕೆಲವೆಡೆ ಅನರ್ಹರಿಗೂ ಪರಿಹಾರ ನೀಡಿರುವ ಬಗ್ಗೆ ಗಮನಕ್ಕೆ ಬಂದಿದೆ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ತಿಳಿಸಿದ್ದಾರೆ.

ಕೆಲವೊಂದು ಕಡೆ ಅನರ್ಹ ಫಲಾನುಭವಿಗಳಿಗೆ ಪರಿಹಾರ ಧನ ಮಂಜೂರು ಮಾಡಲು ನಿಯಮಬಾಹೀರ ಸರ್ವೇಯಾಗುತ್ತಿರುವ ಕುರಿತು ನನ್ನ ಗಮನಕ್ಕೆ ಬಂದಿದ್ದು, ಈ ಕುರಿತು ಕಂಡುಬಂದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ  ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಅರ್ಹ ನೆರೆ ಸಂತ್ರಸ್ತರ ಕುಟುಂಬಗಳಿಗೆ ಸರಕಾರದಿಂದ ನೀಡುವ ಪರಿಹಾರಗಳು ಪಾರದರ್ಶಕವಾಗಿ ತಲುಪಬೇಕಾಗಿರುವದರಿಂದ ಅರ್ಹ ಸಂತ್ರಸ್ತ ಕುಟುಂಬಗಳ ಪಟ್ಟಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿಗಳ ಸೂಚನಾ ಫಲಕಗಳಲ್ಲಿ, ಸಾರ್ವಜನಿಕವಾಗಿ ಹಾಗೂ ಇಲಾಖೆಗಳ ವೆಬ್‌ಸೈಟಗಳಲ್ಲಿ ಪ್ರಕಟಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಸವಜ್ಯೋತಿ ಯೂಥ್ ಫೌಂಡೇಶನ್ ಪ್ರಥಮ ಶಾಖೆ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button