GIT add 2024-1
Laxmi Tai add
Beereshwara 33

*ತಂದೆ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ಭರ್ಜರಿ ಪ್ರಚಾರ ನಡೆಸಿದ ಪುತ್ರ ಬಸವಪ್ರಸಾದ ಜೊಲ್ಲೆ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕುಡಚಿ ವಿಧಾನಸಭೆ ಕ್ಷೇತ್ರದ ಹಿಡಕಲ, ಮುಗಳಖೋಡ ಗ್ರಾಮದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರ ಪರವಾಗಿ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಬಸವಪ್ರಸಾದ ಜೊಲ್ಲೆ ಯವರು ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.

Emergency Service

ಕಳೆದ 10 ವರ್ಷದ ಅವಧಿಯಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಸರ್ಕಾರ ಹಲವು ದಿಟ್ಟ ನಿರ್ಧಾರಗಳೊಂದಿಗೆ ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುವಂತೆ ಮಾಡಿದೆ. ದೇಶದ ಸುಭದ್ರತೆಗಾಗಿ ಮತ್ತೊಮ್ಮೆ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಅಣ್ಣಾಸಾಹೇಬ ಜೊಲ್ಲೆ ಯವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕುಡಚಿ ಮಂಡಲ ಅಧ್ಯಕ್ಷರಾದ ಶ್ರೀಧರ ಮೂಡಲಗಿ,ಚಿಕ್ಕೋಡಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದ ನವಿಹಾಳೆ, ಮಂಡಲ ಪ್ರಭಾರಿಗಳಾದ ರಾಜಶೇಖರ ಖನದಾಳೆ, ಮಂಡಲ ಸಂಚಾಲಕರಾದ ಮಲ್ಲಿಕಾರ್ಜುನ ಖಾನಗೌಡರ, ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ನಿಂಗಪ್ಪಾ ಪಕಾಂಡೆ,ಗ್ರಾ ಪಂ ಸದಸ್ಯರು, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Bottom Add3
Bottom Ad 2