
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ವಿಧಾನ ಪರಿಷತ್ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ, ಚಿಕ್ಕೋಡಿ ಮತಕ್ಷೇತ್ರದ ಕಾಡಾಪೂರ ಗ್ರಾಮದ ಸರ್ಕಾರಿ ಫ್ರೌಡಶಾಲೆಯಲ್ಲಿ ಗ್ರಾಮದ ಚುನಾವಣಾ ಪ್ರಚಾರ ಸಭೆ ನಡೆಸಿದ ಸಂಸದ ಅಣ್ಣಾಸಾಹೇಬ ಜೊಲ್ಲೆ, ಸುಭದ್ರ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಶಿಕ್ಷಣದ ಗುಣಮಟ್ಟ ಸುಧಾರಿಸುವಲ್ಲಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಜೂನ್ 13 ರಂದು ನಡೆಯುವ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಮನವಿ ಮಾಡಿದರು. ಶೈಕ್ಷಣಿಕ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಗೆ ನಮ್ಮ ಪಕ್ಷದ ಅಭ್ಯರ್ಥಿಗಳಾದ ಹನುಮಂತ ನಿರಾಣಿ ಮತ್ತು ಅರುಣ ಶಹಾಪುರ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ, ಬಿಜೆಪಿ ಗೆಲ್ಲಿಸಿ ಎಂದು ಬೆಂಬಲ ಕೋರಿದರು.
ಈ ಸಂದರ್ಭದಲ್ಲಿ ಅರಣ್ಯಸಿದ್ದೇಶ್ವರ ಸಂಸ್ಥೆಯ ಅದ್ಯಕ್ಷರಾದ ಸರ್ಜೆರಾವ ಶಿಂಧೆ, ಮಹಾಂತೇಶ ಪಾಟೀಲ, ಮಾರುತಿ ಗುರುನಾಥ, ಕಿರಣ ಕೋರೆ, ರಾಜಾರಾಮ ಬಡಿಗೇರ, ಮುಖ್ಯೋಪಾಧ್ಯಯರಾದ ವಿ.ಎಮ್. ಬಡಿಗೇರ ಸ್ಥಳೀಯ ಮುಖಂಡರು, ಮುಖ್ಯೋಪಾಧ್ಯಾಯರು, ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಖಾನಾಪುರ ತಾಲೂಕಿನಾದ್ಯಂತ ಶಿಕ್ಷಕರ ಮತ ಯಾಚಿಸಿದ ಡಾ.ಸೋನಾಲಿ ಸರ್ನೋಬತ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ