Kannada NewsLatestNationalPolitics

*ಅತೀ ಹೆಚ್ಚು ಪ್ರಶ್ನೆ ಕೇಳಿದ ಬೆಳಗಾವಿ ವಿಭಾಗದ ಸಂಸದ ಯಾರು ಗೊತ್ತೆ?*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಚಿಕ್ಕೋಡಿ-ಬೆಳಗಾವಿ ಕಂದಾಯ ವಿಭಾಗದಲ್ಲಿ ಬೆಳಗಾವಿ, ವಿಜಯಪುರ, ಧಾರವಾಡ, ಬಾಗಲಕೋಟ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಸೇರಿದಂತೆ ಏಳು ಲೋಕಸಭಾ ಕ್ಷೇತ್ರಗಳಿದ್ದು, ಈ ಏಳು ಕ್ಷೇತ್ರಗಳ ಸಂಸದರ ಪೈಕಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು 2019 ರಿಂದ ಇಂದಿನವರೆಗೆ 17ನೇ ಸಂಸತ್ ಅವಧಿಯಲ್ಲಿ ಅತೀ ಹೆಚ್ಚು ಪ್ರಶ್ನೆ ಕೇಳಿ ಕ್ಷೇತ್ರ ಸೇರಿದಂತೆ ದೇಶದ ಹಲವು ವಿಷಯಗಳ ಅಭಿವೃದ್ಧಿಗೆ ಕಾರಣರಾಗಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಳಗಾವಿ ಕಂದಾಯ ವಿಭಾಗದಲ್ಲಿ 7 ಕ್ಷೇತ್ರಗಳಿದ್ದು, ಕೇಂದ್ರ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಸಚಿವರಾಗಿರುವ ಧಾರವಾಡ ಕ್ಷೇತ್ರದ ಸಂಸದ ಪ್ರಲ್ಹಾದ ಜೋಶಿ ಅವರನ್ನು ಹೊರತು ಪಡಿಸಿದರೆ, ಬೆಳಗಾವಿ ಸಂಸದೆ ಮಂಗಲಾ ಸುರೇಶ ಅಂಗಡಿ-18, ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ-18, ಬಾಗಲಕೋಟ ಸಂಸದ ಪಿ ಸಿ ಗದ್ದಿಗೌಡರ-76, ಹಾವೇರಿ ಸಂಸದ ಶಿವಕುಮಾರ ಉದಾಸಿ-213, ವಿಜಯಪುರ ಸಂಸದ ರಮೇಶ ಜಿಗಜಿಣಗಿ-1 ಪ್ರಶ್ನೆಯನ್ನು ಕೇಳಿದ್ದಾರೆ.

ಆದ್ರೆ ಇದೇ ಮೊದಲ ಬಾರಿ ಸಂಸದನಾಗಿ ಆಯ್ಕೆಯಾದರೂ ಕೂಡ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ-269 ಪ್ರಶ್ನೆಗಳನ್ನು ಕೇಳುವ ಮೂಲಕ ತಮ್ಮ ರಾಜಕೀಯ ಪಟುತ್ವನ್ನು ಸದನದಲ್ಲಿ ಮೆರೆದಿದ್ದು, ಅಲ್ಲದೇ ರಾಷ್ಟ್ರೀಯ, ರಾಜ್ಯ ಹಾಗೂ ಸ್ಥಳೀಯ ಸಮಸ್ಯೆಗಳ ಕುರಿತು ಸಾಕಷ್ಟು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡಿದ್ದಾರೆ. ಹೀಗಾಗಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ತಮ್ಮದೇ ಆದ ಪಾತ್ರವನ್ನು ವಹಿಸಿದ್ದು ಇಲ್ಲಿ ಎದ್ದು ಕಾಣುತ್ತದೆ.

ಬೆಳಗಾವಿ ವಿಭಾಗದ 7 ಜನ ಸಂಸದರ ಪೈಕಿ ಚಿಕ್ಕೋಡಿಯ ಅಣ್ಣಾಸಾಹೇಬ ಜೊಲ್ಲೆ, ಬೆಳಗಾವಿಯ ಮಂಗಲಾ ಅಂಗಡಿಯವರು ಇದೇ ಮೊದಲ ಭಾರಿಗೆ ಸಂಸದರಾಗಿ ಆಯ್ಕೆಯಾಗಿದ್ದು, ಇನ್ನುಳಿದವರು ಒಂದಕ್ಕಿಂತ ಹೆಚ್ಚು ಭಾರಿ ಸಂಸದರಾಗಿ ಕೆಲಸ ಮಾಡಿದವರಾಗಿದ್ದಾರೆ. ಇದೇ ಮೊದಲ ಭಾರಿಗೆ ಸಂಸದರಾಗಿದ್ದರೂ ಕೂಡ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು 2019 ರಿಂದ ಇಲ್ಲಿಯವರೆಗೆ 269 ಪ್ರಶ್ನೆಗಳನ್ನು ಕೇಳಿದ್ದು, ಸಂಸತ್ತಿನಲ್ಲಿ ತಮ್ಮ ಎಲ್ಲಾ ಪ್ರಶ್ನೆಗಳಿಗೂ ಜೊಲ್ಲೆ ಸಮರ್ಪಕ ಉತ್ತರ ಪಡೆದುಕೊಂಡಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ವಿದೇಶ ನೇರ ಹೂಡಿಕೆ, ನೈಸರ್ಗಿಕ ಸಂಪನ್ಮೂಲಗಳ ಲಭ್ಯತೆ, ಜಾಗತಿಕ ಆರ್ಥಿಕ ಹಿಂಜರಿತ, ಕರ್ನಾಟಕದಲ್ಲಿ ರೈಲ್ವೆ ಸೌಲಭ್ಯಗಳು, ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಅಡಿಯಲ್ಲಿ ವಿವಿಧ ಸಣ್ಣ ಉದ್ಯಮಗಳ ಸ್ಥಾಪನೆ, ಕಾರ್ಯವೈಖರಿ ಸೇರಿದಂತೆ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗಿನ ಎಲ್ಲಾ ವಿಷಯಗಳ ಕುರಿತು ಹೆಮ್ಮೆಯ ಪ್ರದಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಯ ವಿವಿಧ ಇಲಾಖೆಯ ಸಚಿವರಿಂದ ಸಮರ್ಪಕ ಮಾಹಿತಿ ಪಡೆದುಕೊಂಡು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆಗಿರುವ ಪಾತ್ರವನ್ನು ಚಿಕ್ಕೋಡಿ ಸಂಸದ ಜೊಲ್ಲೆ ನಿರ್ವಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button