Belagavi NewsBelgaum NewsElection News

*ಕುಟುಂಬ ಸದಸ್ಯರೊಂದಿಗೆ ಬಂದು ಮತದಾನ ಮಾಡಿದ ಸಂಸದ ಅಣ್ಣಸಾಹೇಬ-ಶಾಸಕಿ ಶಶಿಕಲಾ ಜೊಲ್ಲೆ*

ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಿ: ಸಂಸದ ಅಣ್ಣಾಸಾಹೇಬ ಜೊಲ್ಲೆ

Related Articles

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಅಂಗವಾಗಿ ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ಯಕ್ಸಂಬಾ ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಮರಾಠಿ ಶಾಲೆಯ ಬೂತ್ ನಂಬರ್ 27 ರಲ್ಲಿ ಜನರೊಂದಿಗೆ ಸರದಿ ಸಾಲಿನಲ್ಲಿ ನಿಂತು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ,ಶಾಸಕಿ ಶಶಿಕಲಾ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಪ್ರಿಯಾ ಜೊಲ್ಲೆ ಮತ ಚಲಾಯಿಸಿದರು.

ನಿಪ್ಪಾಣಿ ಮತಕ್ಷೇತ್ರದ ಭಿವಶಿ ಗ್ರಾಮದಲ್ಲಿ ಬೂತ ನಂಬರ 130 ರಲ್ಲಿ ಸರಕಾರಿ ಶಾಲೆಯಲ್ಲಿ ಬಸವಜ್ಯೋತಿ ಯೂತ್ ಫೌಂಡೇಶನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಹಾಗೂ ಯಶಸ್ವಿನಿ ಜೊಲ್ಲೆ ಮತ ಚಲಾಯಿಸಿದರು.

ಸಂಸದ ಜೊಲ್ಲೆ ಮಾತನಾಡಿ ಮತದಾನ ಪ್ರತಿಯೊಬ್ಬರ ಹಕ್ಕು.ಸುಭದ್ರ ಪ್ರಜಾಪ್ರಭುತ್ವದಲ್ಲಿ ಸರ್ವರೂ ಪಾಲ್ಗೊಂಡು, ಉತ್ತಮ ಸಮಾಜಕಟ್ಟಲು ಎಲ್ಲರೂ ತಮ್ಮ ಅತ್ಯಮೂಲ್ಯವಾದ ಮತವನ್ನು ಆದಷ್ಟು ಬೇಗನೆ ಮತ ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button