Belagavi NewsBelgaum NewsKannada NewsKarnataka News

ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಕ್ಕೆ ಚುನಾವಣೆ ಘೋಷಣೆ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ೨೨ನೇ ಅವಧಿಗೆ ಮಹಾಪೌರ ಹಾಗೂ ಉಪಪೌರರ ಸ್ಥಾನಗಳಿಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಫೆ.೧೫ ರಂದು ಬೆಳಗಾವಿಯ ಮಹಾನಗರ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಚುನಾವಣೆಯನ್ನು ನಡೆಸಲಾಗುತ್ತಿದೆ.
ಫೆ.೧೫ ರಂದು ಬೆಳಗ್ಗೆ ೯ ಗಂಟೆಯಿಂದ ಮಹಾಪೌರ ಮತ್ತು ಉಪಮಹಾಪೌರರ ಸ್ಥಾನಕ್ಕೆ ನಾಮಪತ್ರಗಳನ್ನು ಸ್ವೀಕರಿಸುವುದು. ಮಧ್ಯಾಹ್ನ ೧ ಗಂಟೆಗೆ ಸಭೆ ಆರಂಭವಾಗುವುದು. ನಂತರ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಕ್ಕೆ ಆಯ್ಕೆಯಾಗುವುದಕ್ಕೆ ಚುನಾವಣೆ ನಡೆಯಲ್ಲಿದೆ.
ಚುನಾವಣೆ ದಿವಸ ಮಹಾನಗರ ಪಾಲಿಕೆ ಕಾರ್ಯಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಚುನಾಯಿತ ಸದಸ್ಯರನ್ನು ಗುರುತಿಸಲು ಪಾಲಿಕೆ ಸಿಬ್ಬಂದಿಯವರನ್ನು ನಿಯೋಜಿಸಲಾಗಿದೆ.
ಚುನಾಯಿತ ಸದಸ್ಯರು ಗುರುತಿನ ಚೀಟಿ ಕಡ್ಡಾಯವಾಗಿ ತಗೆದುಕೊಂಡು ಬರಬೇಕು. ಎಲ್ಲರು ಇದಕ್ಕೆ ಸಹಕರಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Articles

Back to top button