Latest

ಬೆಂಗಳೂರು ದಕ್ಷಿಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹರಿಪ್ರಸಾದ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ.

Home add -Advt

ಬಿ.ಕೆ.ಹರಿಪ್ರಸಾದ ಅಲ್ಲಿ ಕಣಕ್ಕಿಳಿಯಲಿದ್ದಾರೆ. ಧಾರವಾಡ ಕ್ಷೇತ್ರದ ಅಭ್ಯರ್ಥಿ ಮಾತ್ರ ಬಾಕಿ ಉಳಿದಂತಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಈ ಹಿಂದೆ ಬಿಜೆಪಿಯ ಅನಂತಕುಮಾರ ಪ್ರತಿನಿಧಿಸುತ್ತಿದ್ದರು. ಇದೀಗ ಬಿಜೆಪಿಯಿಂದ ಅನಂತಕುಮಾರ ಅವರ ಪತ್ನಿ ತೇಜಸ್ವಿನಿಯವರನ್ನು ಕಣಕ್ಕಿಳಿಸಬೇಕೆನ್ನುವ ಚಿಂತನೆ ನಡೆದಿದೆ. ಆದರೆ ಈವರೆಗೂ ಅಧಿಕೃತವಾಗಿ ಪ್ರಕಟಿಸಿಲ್ಲ.

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ. ಜೊತೆಗೆ ಯುವನಾಯಕ ತೇಜಸ್ವಿ ಸೂರ್ಯ ಹೆಸರೂ ಕೇಳಿಬರುತ್ತಿದೆ.

ಹರಿಪ್ರಸಾದ ಸ್ಪರ್ಧೆಯಿಂದಾಗಿ ಬೆಂಗಳೂರು ದಕ್ಷಿಣ ಈಗ ಪ್ರತಿಷ್ಟೆಯ ಕಣವಾಗಿ ಮಾರ್ಪಟ್ಟಿದೆ.

ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿಯೋ… ತೇಜಸ್ವಿಯೋ… ಗೊಂದಲ

(ಪ್ರಗತಿವಾಹಿನಿ ಸುದ್ದಿಗಳನ್ನು ಇತರರಿಗೆ ಶೇರ್ ಮಾಡಿ)

Related Articles

Back to top button