ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಜೊಲ್ಲೆ ಗ್ರೂಪ್ನ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಕೊ ಆಫ್ ಕ್ರೆಡಿಟ್ ಸೊಸಾಯಿಟಿ ಹಾಗೂ ಅಂಗ ಸಂಸ್ಥೆಗಳ ವಾರ್ಷಿಕ ಸರ್ವ ಸಾಧಾರಣಾ ಸಭೆಯನ್ನು ಶುಕ್ರವಾರ ಜೂ. ೯ ರಂದು ಸಂಜೆ ೫ ಗಂಟೆಗೆ ನನದಿ ಸಿಬಿಎಸ್ಇ ಶಾಲೆಯ ಆವರಣದಲ್ಲಿರುವ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥಾಪಕರು ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜೊಲ್ಲೆ ಗ್ರೂಪ್ನ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೋಸಾಯಿಟಿ ಲೀ ಯಕ್ಸಂಬಾ (ಬಹು ರಾಜ್ಯ)(೩೩ನೇ) ಮತ್ತು ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ನೀ ಯಕ್ಸಂಬಾ(೨೯ನೇ) ಮತ್ತು ಯಕ್ಸಂಬಾ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ ನಿ.,(೩೦ನೇ) ಮತ್ತು ಯಕ್ಸಂಬಾ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘ ನೀ.,(೧೬ನೇ) ಲೋಕ ಕಲ್ಯಾಣ ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಯಕ್ಸಂಬಾ(೧೨ನೇ) ಜೊಲ್ಲೆ ಎಜುಕೇಶನ್ ಸೊಸೈಟಿ ಯಕ್ಸಂಬಾ ಇದರ ೨೮ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ೫ ಗಂಟೆಗೆ ಬೀರೇಶ್ವರ ಭವನದಲ್ಲಿ ಜರುಗಲಿದೆ.
ಸಂಸ್ಥೆಯ ಅಧ್ಯಕ್ಷರು, ನಿರ್ದೇಶಕ ಮಂಡಳಿ ಸದಸ್ಯರು, ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಬೇಕೆಂದು ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ