*ಜೈನ್ ಹೆರಿಟೇಜ್ ಶಾಲೆಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಪುರಸ್ಕಾರ*

ಜೈನ್ ಹೆರಿಟೇಜ್ ಶಾಲೆಯಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಪುರಸ್ಕಾರ; ಶಿಸ್ತು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಮಹಾಂತೇಶ ಹೊಸಪೇಟಿ ಕರೆ
ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ದೃಢಸಂಕಲ್ಪ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು ಜೀವನದಲ್ಲಿ ಯಶಸ್ಸು ಸಾಧಿಸಲು ಅತ್ಯಂತ ಮುಖ್ಯ ಎಂದು ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ ವಿ. ಹೊಸಪೇಟಿ ಹೇಳಿದರು.

ಜೈನ್ ಹೆರಿಟೇಜ್ ಶಾಲೆಯಲ್ಲಿ ಗ್ರೇಡ್ 1 ಮತ್ತು 2ರ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಬಾಲ್ಯದಿಂದಲೇ ಶಿಸ್ತು ಮತ್ತು ಪರಿಶ್ರಮದ ಮನೋಭಾವ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದರು. ಸಾಧನೆಯ ಹಾದಿಯಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

ಸಮಾರಂಭದಲ್ಲಿ ಜೈನ್ ಹೆರಿಟೇಜ್ ಶಾಲೆಯ ನಿರ್ದೇಶಕಿ ಶ್ರದ್ಧಾ ಖಟವಟೆ ಹಾಗೂ ಮುಖ್ಯ ಆಡಳಿತಾಧಿಕಾರಿ ಅಮೀ ದೋಷಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.




