Film & EntertainmentKannada NewsKarnataka NewsLatestPolitics

*ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮತ್ತೊಬ್ಬ ನಟನ ಬಂಧನ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸದ್ದು ಮಾಡಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕ್ಕೊಂದು ಟ್ವೀಸ್ಟ್ ಪಡೆದುಕೊಳ್ಳುತ್ತಿದೆ. ಈ ಕೇಸ್ ಸಂಬಂಧಿಸಿದಂತೆ ಮತ್ತೊಬ್ಬ ಸ್ಯಾಂಡಲ್‌ವುಡ್‌ನ ನಟನನ್ನು ಪೊಲೀಸರು ಬಂಧಿಸಿದ್ದಾರೆ.

ಹಲವು ಕ‌ನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದ ಪ್ರದೋಶ್ ಎಂಬಾತನನ್ನು 14 ನೇ ಆರೋಪಿಯಾಗಿ ಬಂಧಿಸಲಾಗಿದೆ.‌ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ 14ನೇ ಆರೋಪಿಯಾಗಿ ಬಂಧನ ಆಗಿರುವ ಈತ ದರ್ಶನ್ ಜೊತೆಗಿನ ಬೃಂದಾವನ, ಬುಲ್‌ಬುಲ್ ಚಿತ್ರಗಳಲ್ಲಿ ನಟಿಸಿದ್ದಾನೆ. ಅಲ್ಲದೇ ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಹಿಂದೆ ಮುಂದೆ ಓಡಾಡಿಕೊಂಡಿದ್ದ. ಇದಲ್ಲದೆ ಬಿಜೆಪಿ ಸಚಿವರೊಬ್ಬರ ಜೊತೆ ಆಪ್ತ ಸಹಾಯಕನಾಗಿ ಕೂಡ ಕೆಲಸ ಮಾಡಿದ್ದು, ಮಾತ್ರವಲ್ಲದೇ ಬಿಜೆಪಿ ಐಟಿ ವಿಭಾಗದಲ್ಲಿಯೂ ಕೆಲಸ ಮಾಡಿದ್ದ ಎಂದು ತಿಳಿದುಬಂದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button