Kannada NewsKarnataka NewsLatest
*ಅಪ್ರಾಪ್ತ ಬಾಲಕಿ ಅತ್ಯಾಚಾರ ಕೇಸ್; ಅಪರಾಧಿಗೆ 20 ವರ್ಷ ಜೈಲುಶಿಕ್ಷೆ*

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಚಾಮರಾಜನಗರ ಕೋರ್ಟ್ ಆದೇಶ ಹೊರಡಿಸಿದೆ.
ಚಾಮರಾಜನಗರದ ಕಾನೂನು ಸೇವಾ ಪ್ರಾಧಿಕಾರದ ಮಕ್ಕಳ ಸ್ನೇಹಿ ನ್ಯಾಯಾಧೀಶರಾದ ಎ.ಸಿ.ನಿಶಾರಾಣಿ ಅವರಿದ್ಧ ಪೀಠ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 40,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚರವೆಸಗಿದ್ದ 21 ವರ್ಷದ ರಂಗಸ್ವಾಮಿ ಎಂಬಾತ ಇದೀಗ ಜೈಲು ಪಾಲಾಗಿದ್ದಾನೆ. ಅಲ್ಲದೇ ಸಂತ್ರಸ್ತ ಬಾಲಕಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಕೋರ್ಟ್ ಸೂಚನೆ ನೀಡಿದೆ.




