ಜನರ ಹಿತಕ್ಕಾಗಿ ನೂತನ ಕೋವಿಡ್ ಆರೈಕೆ ಕೇಂದ್ರ ಸ್ಥಾಪನೆ ಸಚಿವೆ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಬುಧವಾರ ನಿಪ್ಪಾಣಿ ಮತಕ್ಷೇತ್ರದ ಕಾರದಗಾ ಗ್ರಾಮದಲ್ಲಿರುವ ಬಿ.ಸಿ.ಎಮ್. ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿದರು.
ಜೊಲ್ಲೆ ಉದ್ಯೋಗ ಸಮೂಹ ಹಾಗೂ ಸರ್ಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ 20 ಹಾಸಿಗೆ ಸಾಮರ್ಥ್ಯದ ನೂತನ ಕೋವಿಡ್ ಆರೈಕೆ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಸದರಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಅಗತ್ಯವಿರುವ ವೈದ್ಯರು, ನರ್ಸ್ ಹಾಗೂ ಡಿ ಗ್ರುಪ್ ಸಿಬ್ಬಂದಿಗಳನ್ನು ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯಿಂದಲೇ ನೇಮಿಸಿ, ಸೋಂಕಿತರ ಚಿಕಿತ್ಸೆಗೆ ಸಕಲ ಸೌಲಭ್ಯಗಳನ್ನು ಒದಗಿಸಲು ತಿರ್ಮಾನಿಸಲಾಗಿದೆ. ಜನತೆಯ ಆರೋಗ್ಯ ರಕ್ಷಣೆಗಾಗಿ ಸಕಲ ಸಹಕಾರ ನೀಡಲು ಸದಾ ಸಿದ್ದರಿದ್ದೇವೆ. ನಮ್ಮ ಈ ಕಾರ್ಯದಲ್ಲಿ ಕೈಜೋಡಿಸಿರುವ ಖಾಸಗಿ ವೈದ್ಯರಾದ ಡಾ. ನವನಾಥ ತೇಲಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಅಧ್ಯಕ್ಷರಾದ ಪವನ ಪಾಟೀಲ, ರಾಮಗೊಂಡ ಪಾಟೀಲ, ನಿತೇಶ ಖೋತ, ದಾದಾಸೋ ನರಗಟ್ಟೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ