*ರಾಜ್ಯದಲ್ಲಿ ಮುಂದಿನ ಆರು ತಿಂಗಳಲ್ಲಿ ಇನ್ನೊಂದು ಚುನಾವಣೆ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಆರು ತಿಂಗಳಲ್ಲಿ ಇನ್ನೊಂದು ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ. ಸಭೆಗೆ ಆಯ್ಕೆಯಾದ ನಾಯಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕಾರಣ ಆ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.
ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ, ಹೆಚ್.ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣ ಹಾಗೂ ಕಾಂಗ್ರೆಸ್ ಶಾಸಕ ಇ.ತುಕಾರಾಮ್ ಅವರು ಸಂಡೂರಿನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಮೂವರು ನಾಯಕರುಗಳ ರಾಜೀನಾಮೆ ಪತ್ರವನ್ನು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅಂಗೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೀಘ್ರವೇ ಉಪ ಚುನಾವಣೆ ನಡೆಯುವುದು ಖಚಿತವಾಗಿದೆ.
ಹೆಚ್ ಡಿಕೆ ಮಂಡ್ಯದಿಂದ, ಬೊಮ್ಮಾಯಿ ಹಾವೇರಿ-ಗದಗದಿಂದ ಹಾಗೂ ಇ.ತುಕಾರಾಮ್ ಬಳ್ಳಾರಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರೂ ಆಯ್ಕೆಯಾಗಿದ್ದು, ಇವರು ಈವರೆಗೆ ಪ್ರತಿನಿಧಿಸುತ್ತಿದ್ದ ಪರಿಷತ್ ಸದಸ್ಯ ಸ್ಥಾನವೂ ಖಾಲಿಯಾಗಲಿದೆ. ಈ ಹಿನ್ನೆಲೆಯಲ್ಲಿ ತೆರವಾಗುವ ಈ ಸ್ಥಾನಕ್ಕೂ ಚುನಾವಣೆ ನಡೆಯಲಿದೆ. ಖಾಲಿಯಾದ ಸ್ಥಾನಕ್ಕೆ ಮುಂದಿನ ಆರು ತಿಂಗಳೊಳಗೆ ಚುನಾವಣೆ ನಡೆಯಲಿದ್ದು, ಚುನಾವಣಾ ದಿನಾಂಕ ಯಾವಗ ಘೋಷಣೆ ಆಗುತ್ತೆ ಎಂದು ಕಾದಿ ನೋಡಬೇಕು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ