Belagavi NewsBelgaum NewsKannada NewsKarnataka News

*ರಾಜ್ಯದಲ್ಲಿ ಮತ್ತೆ ಐದು ದಿನ ಭಾರಿ ಮಳೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಮತ್ತೆ 5 ದಿನ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಭಾರೀ ಹಾಗೂ ಸಾಧಾರಣ ಮಳೆಯಾಗುವ ಪ್ರದೇಶಗಳನ್ನು ಹೇಳಿದ್ದು, ಅಲ್ಲಿ ಮಳೆ ಅಲರ್ಟ್‌ಗಳನ್ನು ನೀಡಲಾಗಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇಂದು ಮತ್ತು ನಾಳೆ ಉತ್ತರ ಒಳನಾಡಿನ ಪ್ರದೇಶಗಳಲ್ಲೂ ಮಳೆಯಾಗಲಿದೆ. ಹೀಗಾಗಿ ಈ ಭಾಗಕ್ಕೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Home add -Advt

ಇನ್ನು, ಆಗಸ್ಟ್‌ 20 & 21 ರಂದು , ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಆ 2 ದಿನ ಕರಾವಳಿ ಭಾಗದಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೇ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ

ಇನ್ನು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

Related Articles

Back to top button