Belagavi NewsBelgaum NewsKannada NewsKarnataka News
ಮತ್ತೊಂದು ಗ್ರಾಮ ಒನ್ ಕೇಂದ್ರಕ್ಕೆ ಬೀಗ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಚಿಂಚಲಿಯ ಬಸ್ ನಿಲ್ದಾಣದ ಬಳಿಯ ಗ್ರಾಮ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಕೇಂದ್ರದ ಅಜಿತ್ ಶ್ರೀಕಾಂತ ಇದ್ಲಿ ವಿರುದ್ಧ ದೂರು ಕೂಡ ದಾಖಲಿಸಲಾಗಿದೆ. ಕೇಂದ್ರದ ಲಾಗಿನ್ ಐಡಿಯನ್ನು ರದ್ದು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.




