Latest

ಹಾಲು ಉತ್ಪಾದಕರಿಗೆ ಮತ್ತೊಂದು ಸಂತಸದ ಸುದ್ದಿ

 ಪ್ರಗತಿವಾಹಿನಿ ಸುದ್ದಿ,  ಬೆಂಗಳೂರು : ಹಾಲು ಉತ್ಪಾದಕ ರೈತರಿಗೆ ಉತ್ಪಾದನಾ ವೆಚ್ಚವನ್ನು ತಗ್ಗಿಸಿ ಹಾಲು ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಾಳೆಯಿಂದಲೇ ಜಾರಿಗೆ ಬರುವಂತೆ ಪ್ರತಿ ಟನ್‌ಗೆ ರೂ. ೫೦೦ ಕಡಿಮೆ ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಈ ಬಗ್ಗೆ ಶುಕ್ರವಾರ ಸಂಜೆ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಫೆಬ್ರುವರಿ ಮತ್ತು ಮಾರ್ಚ ತಿಂಗಳಲ್ಲಿ ಪ್ರತಿ ಟನ್‌ಗೆ ರೂ. ೫೦೦ ರಿಯಾಯತಿಯನ್ನು ನೀಡಲು ನಿರ್ಧರಿಸಲಾಗಿದ್ದು, ಇದರಿಂದಾಗಿ ಒಟ್ಟಾರೆ ಪ್ರತಿ ಟನ್‌ಗೆ ೧ ಸಾವಿರ ರೂ. ಹಣ ಕಡಿಮೆ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕ ಹಾಲು ಮಹಾಮಂಡಳಿಯ ೫ ಪಶು ಆಹಾರ ಘಟಕಗಳಿಂದ ತಿಂಗಳಿಗೆ ಅಂದಾಜು ೫೨ ಸಾವಿರ ಟನ್ ಪಶು ಆಹಾರವನ್ನು ಉತ್ಪಾದನೆ ಮಾಡಿ ಹಾಲು ಉತ್ಪಾದಕರಿಗೆ ಮಾರಾಟ ಮಾಡಲಾಗುತ್ತಿದೆ. ಪ್ರತಿ ಟನ್‌ಗೆ ಒಟ್ಟು ಸಾವಿರ ರೂ. ಹಣ ಕಡಿಮೆ ಮಾಡುವುದರಿಂದ ಹಾಲು ಮಹಾಮಂಡಳಿಯು ತಿಂಗಳಿಗೆ ೫ ಕೋಟಿ ರೂ.ಗಳನ್ನು ರಾಜ್ಯದ ಹಾಲು ಉತ್ಪಾದಕ ರೈತರಿಗೆ ನೀಡಿದಂತಾಗುತ್ತದೆ.

ರೈತರ ಆರ್ಥಿಕಾಭಿವೃದ್ಧಿ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯು ಈ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಂಡಿದ್ದು, ಹಾಲು ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹಿಸುವ ಸಂಬಂಧ ಪಶು ಆಹಾರದ ಬೆಲೆಯನ್ನು ಇಳಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button