Kannada NewsKarnataka NewsNational

*ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ: ಮೂರು ಸಾವು*

ಪ್ರಗತಿವಾಹಿನಿ ಸುದ್ದಿ: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿರುವ ಎಂಟು ಜನರು ಗಾಯಗೊಂಡಿದ್ದಾರೆ ಎಂದು ದಿಯೋಘರ್ ಉಪ ಆಯುಕ್ತ ವಿಶಾಲ್ ಸಾಗರ್ ಹೇಳಿದ್ದಾರೆ.

Home add -Advt

11 ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು. ನಾಲ್ಕು ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ತಕ್ಷಣವೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ನಿಯೋಜಿಸಿ ಅವಶೇಷಗಳಡಿಯಿಂದ ಏಳು ಜನರನ್ನು ಹೊರತೆಗೆಯಲಾಗಿದೆ. ಎಂದು ಅವರು ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ದಿಯೋಘರ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರು ಮತ್ತು ಮೃತರ ಕುಟುಂಬಗಳಿಗೆ ಸರ್ಕಾರದಿಂದ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದು ಡಿಸಿ ಹೇಳಿದ್ದಾರೆ.

Related Articles

Back to top button